ಬಂಟ್ವಾಳ: ಲೋರೆಟ್ಟೋ ಮಾತಾ ಚರ್ಚ್ ನಲ್ಲಿ ಗರಿಗಳ ಭಾನುವಾರ ವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು.
ಚರ್ಚ್ ವಠಾರದಲ್ಲಿ ಆರಂಭಗೊಂಡ ಪ್ರಾರ್ಥನಾ ವಿದಿಯ ಮೆರವಣಿಗೆಯಲ್ಲಿ ನೂರಾರು ಭಕ್ತಾದಿಗಳು ಭಕ್ತಿಯಿಂದ ಪಾಲ್ಗೊಂಡು, ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತಾ , ವಂ. ಫೆಲಿಕ್ಸ್ ಲೋಬೊ ಬಲಿ ಪೂಜೆಯನ್ನು ಅರ್ಪಿಸಿದರು. ಚರ್ಚ್ ಪಾಲನಾ ಮಂಡಳಿ ಕೋವಿಡ್ ಪ್ರಯುಕ್ತ ಮುಂಜಾಗ್ರತ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಲಾಗಿತ್ತು.