ಮಂಗಳೂರು ಮಾ.18: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಆರಂಭಿಸಲಾಗುತ್ತಿದ್ದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೀಶ್ವರ್ ಮಾರ್ಚ್ 20 ರಂದು ಬೆಳಿಗ್ಗೆ 9.30ಗಂಟೆಗೆ ಓಷನ್ ಪರ್ಲ್ ಹೋಟೆಲ್ ನಲ್ಲಿ ಚಾಲನೆ ನೀಡಲಿದ್ದಾರೆ .ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಪತ್ರ ಬಿಡುಗಡೆಗೊಳಿಸಲಿದ್ದಾರೆ .
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ .ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ,ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್,ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ , ಮಂಗಳೂರು ಶಾಸಕ ಯು ಟಿ ಖಾದರ್,,ಮಾಜಿ ಸಚಿವ ಕೃಷ್ಣ ಪಾಲೆಮಾರ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ. ಅನ್ನು ಮಂಗಳೂರು ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .