Sunday, April 7, 2024

ನೇತ್ರ ಪರಿವೀಕ್ಷಕ ಶ್ರೀಧರನ್ ಕೆ.ವಿ.ನಿಧನ

ಬಂಟ್ವಾಳ :ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರ ಪರಿವೀಕ್ಷಕ ಶ್ರೀಧರನ್ ಕೆ.ವಿ. (೫೯)ಅವರು ಮಾ.೨೬ರಂದು ಹೃದಯಾಘಾತದಿಂದ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಅವರು ಶುಕ್ರವಾರ ಮಧ್ಯಾಹ್ನ ಪಾರೆಂಕಿ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅಲ್ಲಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವರು ವಿಟ್ಲ, ಹಿರೆಗುತ್ತಿ, ಬೆಳ್ತಂಗಡಿ, ಪುಂಜಾಲಕಟ್ಟೆ ಮೊದಲಾದೆಡೆ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಮನೆಯಲ್ಲಿಯೂ ಬಡವರಿಗೆ ಉಚಿತವಾಗಿ ನೇತ್ರ ತಪಾಸಣೆ ನಡೆಸಿ ಕನ್ನಡಕ ನೀಡುತ್ತಿದ್ದರು. ಅಪಾರ ದೈವ ಭಕ್ತರಾಗಿದ್ದ ಅವರು ವಿವಿಧ ದೇವಸ್ಥಾನಗಳಿಗೆ ಕೊಡುಗೆ ನೀಡಿದ್ದರು. ಹವ್ಯಾಸಿ ನಾಟಕ ಕಲಾವಿದರಾಗಿದ್ದ ಅವರು ಯಕ್ಷಗಾನ ಪೋಷಕರಾಗಿದ್ದರು. ಕಾಲೇಜು ದಿನಗಳಲ್ಲಿ ಕ್ರೀಡಾಪಟುವಾಗಿದ್ದರು.
ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಪುಂಜಾಲಕಟ್ಟೆ ಆರೋಗ್ಯ ಕೇಂದ್ರ ವೈದ್ಯಾಽಕಾರಿ ಡಾ. ಸತೀಶ್ ಎಂ.ಸಿ., ಡಾ. ಸೋಹನ್ ಕುಮಾರ್, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮ ಶೇಖರ ಜೈನ್ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...