Tuesday, April 9, 2024

ರುದ್ರಭೂಮಿಯಲ್ಲಿ ಭಜನೆ : ಕಂಚಿನಡ್ಕಪದವಿನ ದೇವಭೂಮಿಯಲ್ಲಿ ಶಿವರಾತ್ರಿ ವಿಶೇಷ

ಬಂಟ್ವಾಳ: ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುಧ್ರಭೂಮಿ ಸಮಿತಿ ಹಾಗೂ ಹಿಂದೂ ರುಧ್ರಭೂಮಿ ಅಭಿವೃದ್ದಿ ಸಮಿತಿ ಮಹಾಶಿವರಾತ್ರಿಯ ಅಂಗವಾಗಿ ಆಯೋಜಿಸಿದ್ದ ವಿಶಿಷ್ಟ ಮತ್ತು ಅಪರೂಪದ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂತು.

ಸಾಮಾನ್ಯವಾಗಿ ರುದ್ರಭೂಮಿಯಲ್ಲಿ ಭಜನಾ ಕಾರ್ಯಕ್ರಮ ನಡೆಯುವುದೇ ಅದು ವಿಶೇಷ. ಅದರಲ್ಲೂ ರುದ್ರಭೂಮಿಗೆ ಜನರು ಬರುವುದೇ ವಿರಳ. ಅಂತಹ ಸ್ಥಳದಲ್ಲಿ ರಾತ್ರಿ ಹೊತ್ತಿನಲ್ಲಿ ಶಿವನ ಪ್ರತಿಮೆಯ ಬಳಿ ಕರ್ಪೂರದ ಆರತಿ ಬೆಳಗಿ, ಬಿಲ್ವಾರ್ಚನೆಗೈದು ಪ್ರಾರ್ಥನೆ ಸಲ್ಲಿಸುವ ಅಭೂತಪೂರ್ವ ಕ್ಷಣ ಇಲ್ಲಿತ್ತು.

ರುದ್ರಭೂಮಿ ಮನುಷ್ಯನ ಮೋಕ್ಷ ಸ್ಥಳ, ಇಂತಹ ಪವಿತ್ರ ಸ್ಥಳದ  ಶಿವನ ಸಾನಿಧ್ಯವೂ ಹೌದು, ಇದರ ಬಗ್ಗೆ ಭಯಬೇಡ ಎಂಬ ಸಾಮಾಜಿಕ ಜಾಗೃತಿಯ ಕಾರಣಕ್ಕೆ ಶಿವರಾತ್ರಿಯಂದು ಭಜನೆಯ ಮೂಲಕ ಶಿವಾರಾಧನೆ ನಡೆಸಲಾಗುತ್ತಿದೆ, ವರ್ಷದಿಂದ ವರ್ಷಕ್ಕೆ ಇಲ್ಲಿಗೆ ಶಿವಧ್ಯಾನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯೂ ಏರುತ್ತಿದೆ ಎಂದು ಹಿಂದೂ ರುದ್ರಭೂಮಿ ಸಮಿತಿಯ ಅಧ್ಯಕ್ಷ ಯಶವಂತ ದೇರಾಜೆ ತಿಳಿಸಿದ್ದಾರೆ.

ಎಂ.ಇ.ಐ.ನಿಗಮ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿ.ಪಂ‌.ಸದಸ್ಯ ರವೀಂದ್ರ ಕಂಬಳಿ,

ಸಜೀಪ ಪಡು ಗ್ರಾ.ಪಂ.ಅಧ್ಯಕ್ಷ ವಿಠಲ ಅಮೀನ್, ರುದ್ರಭೂಮಿ ಸಮಿತಿ ಕಾರ್ಯದರ್ಶಿ ಸುರೇಶ್ ಬಂಗೇರ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ರೋಹಿತ್ ಶೆಟ್ಟಿ ನಗ್ರಿಗುತ್ತು, ನಂದಾವರ ಆಡಳಿತ ಮೊಕ್ತೇಸರರಾದ ಅರವಿಂದ ಭಟ್ , ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ

ನಾಗೇಶ್ ಇರಾ, ರಮೇಶ್ ರಾವ್ ಪತ್ತುಮುಡಿ, ಶೇಖರ ಕೆಂಜಿಲ, ಭಾಸ್ಕರ ಕಂಪದಕೋಡಿ, ಪ್ರೀತಂ ಕಾಂತಕೋಡಿ, ಭಾಸ್ಕರ ಮಿತ್ತಪಡ್ಪು, ಮಿಥುನ್ ಪೂಜಾರಿ ಕಲ್ಲಡ್ಕ, ಚಿನ್ಮಯ ಸಾಲಿಯಾನ್, ಲಿಂಗಪ್ಪ ದೋಟ, ಸ್ಥಳೀಯರಾದ ಭಾಸ್ಕರ ಚಟ್ಟೆಕಲ್ಲು, ಉಭಯ ಸಮಿತಿಗಳ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ಮಧ್ಯರಾತ್ರಿವರೆಗೂ ನಡೆದ ಭಜನಾ ಸಂಕೀರ್ತನೆಯಲ್ಲಿ ಸುಮಾರು 8 ಭಜನಾ ತಂಡಗಳು ಭಾಗವಹಿಸಿ ಶಿವರಾತ್ರಿಯನ್ನು ಅರ್ಥಪೂರ್ಣವಾಗಿಸಿತು.  ಮಧ್ಯರಾತ್ರಿವರೆಗೂ ಸಾಲುಸಾಲಾಗಿ ಭಕ್ತಾಧಿಗಳು ಆಗಮಿಸುತ್ತಿದ್ದುದು ವಿಶೇಷವಾಗಿತ್ತು. ಪುರುಷ-ಮಹಿಳೆ ಎಂಬ ಬೇಧಭಾವ ವಿಲ್ಲದೆ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗಿನ ಎಲ್ಲರೂ ಶಿವಧ್ಯಾನದಲ್ಲಿ ತೊಡಗಿದ್ದ ಅಪೂರ್ವ ಸನ್ನಿವೇಶ ಅಲ್ಲಿ ನಿರ್ಮಾಣಗೊಂಡಿತ್ತು.

ಆಗಮಿಸಿದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.

 

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...