ಲಾಸ್ ಏಂಜಲೀಸ್: 2028ರ ಲಾಸ್ ಏಂಜಲೀಸ್ ಒಲಿಂಪಿಕ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ನಿರ್ಧರಿಸಿದ್ದು, ಭಾರತ ಪುರುಷ ಹಾಗೂ ಮಹಿಳಾ ತಂಡಗಳನ್ನು ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.
ಬಿಸಿಸಿಐ 2020ರ ವಾರ್ಷಿಕ ಸಾಮಾನ್ಯ ಸಭೆಯಲ್ಲೂ ಒಲಿಂಪಿಕ್ಸ್ಗೆ ಭಾರತ ತಂಡವನ್ನು ಕಳಿಸಿಕೊಡುವ ಕುರಿತು ಚರ್ಚೆ ನಡೆಸಿತ್ತು. ಇದೀಗ 2028ರ ಒಲಿಂಪಿಕ್ಸ್ನಲ್ಲಿ ಭಾರತ ಕ್ರಿಕೆಟ್ ತಂಡವನ್ನು ಕಳುಹಿಸಿಕೊಡುವ ಕುರಿತಂತೆ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಕ್ರಿಕೆಟ್ 1900ರ ಒಲಿಂಪಿಕ್ಸ್ ನಲ್ಲಿ ಕೊನೆಯ ಬಾರಿಗೆ ಸೇರ್ಪಡೆಗೊಂಡಿತ್ತು.
2021ರ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟವು ಜುಲೈ 23ರಿಂದ ಆಗಸ್ಟ್ 08ರವರೆಗೆ ನಡೆಯಲಿದೆ.