ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಕಾರೊಂದು ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದು ಬೈಕಿನ ಸವಾರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಲೇನಾ ಕಾರು ಚಾಲಕನ ನಿಯಂತ್ರಣ ಕಳೆದು ಎದುರಿನಿಂದ ಬರುತ್ತಿದ್ದ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಒಂದು ಬೈಕಿನ ಸವಾರ ಬುಡೋಳಿ ನಿವಾಸಿ ಅಕ್ಷಯ್ ಅವರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಬೈಕಿನ ಸವಾರ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.