ಬಂಟ್ವಾಳ: ತಾಲೂಕಿನ ವಿಟ್ಲ ಸಾಲೆತ್ತೂರು ರಸ್ತೆಯ ಚರ್ಚ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಆಕ್ಟೀವಾ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ನೀರಾಕಣಿ ನಿವಾಸಿಗಳಾದ ಸಮದ್ ಮತ್ತು ಅಫ್ನಾಝ್ ಎಂಬವರು ಹಾಗೂ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಚಂದಳಿಕೆ ನಿವಾಸಿ ದೂಮಣ್ಣ ಗೌಡ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರ ಪೈಕಿ ಅಫ್ನಾಝ್‌ನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ ವೇಳೆ ಸಮದ್ ಜತೆ ಅಫ್ನಾಜ್ ವಿಟ್ಲ ಪೇಟೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಫ್ನಾಝ್‌ನನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.