ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ಪತ್ನಿ ಅಂಬುಜಾ ದ್ವಾರಕೀಶ್ ಶುಕ್ರವಾರ ನಿಧನರಾಗಿದ್ದಾರೆ.
ಅಂಜುಜಾ ಅವರಿಗೆ 80 ವರ್ಷ ವಯಸ್ಸಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಂಬುಜಾ ಅವರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ದ್ವಾರಕೀಶ್ ಕುಟುಂಬದ ಮೂಲದವರು ತಿಳಿಸಿದೆ ಎಂದು ತಿಳಿದು ಬಂದಿದೆ.
ಅವರು ಐದು ಮಂದಿ ಗಂಡು ಮಕ್ಕಳು ಮತ್ತು ಪತಿ ದ್ವಾರಕೀಶ್ ಅವರನ್ನು ಅಗಲಿದ್ದಾರೆ. ಎಚ್‌ಎಸ್‌ಅರ್ ಲೇಔಟ್‌ನ ಅಪಾರ್ಟ್ಮೆಂಟ್‌ನಲ್ಲಿ ಅಂಬುಜಾ ಪಾರ್ಥೀವ ಶರೀರ ಇಡಲಾಗಿದೆ. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.