Tuesday, April 9, 2024

ಅರಳ, ಹಿರ್ಣಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಬೆಳ್ಳಿ ಹಬ್ಬ   ಎ.3: ಧಾರ್ಮಿಕ ಕಾರ್ಯಕ್ರಮ, ಯಕ್ಷಗಾನ, ಸಮ್ಮಾನ

ಬಂಟ್ವಾಳ: ಬಂಟ್ವಾಳ ತಾ. ಅರಳ ಗ್ರಾಮದ ಹಿರ್ಣಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಬೆಳ್ಳಿ ಹಬ್ಬ ಆಚರಣಾ ಸಮಿತಿ ಆಶ್ರಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಯಕ್ಷಗಾನ ಬಯಲಾಟ ಮತ್ತು ಕಲಾವಿದರಿಗೆ ಸಮ್ಮಾನ ಕಾರ್ಯಕ್ರಮ ಎ.3ರಂದು ಹಿರ್ಣಿಯಲ್ಲಿ ನಡೆಯಲಿದೆ.

ಬೆಳಗ್ಗೆ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಅರ್ಚಕ ಹರೀಶ್ ಭಟ್ ಅವರ ನೇತೃತ್ವದಲ್ಲಿ ಗಣ ಹೋಮ, ದುರ್ಗಾಹೋಮ, ಅಶ್ಲೇಷ ಬಲಿ ಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಟೀಲು ದೇಗುಲದ ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಅವರು ಆಶೀರ್ವಚನ ನೀಡಲಿರುವರು. ಅರಳ ಗ್ರಾ.ಪಂ.ಮಾಜಿ ಅಧ್ಯಕ್ಷ ಜಗದೀಶ ಆಳ್ವ ಅಗ್ಗೊಂಡೆ ಅಧ್ಯಕ್ಷತೆ ವಹಿಸುವರು. ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ, ಹಿಂದೂ ಧರ್ಮೋತ್ಥಾನ ವೇದಿಕೆ ರಾಯಿ ಕೊಲ ಅರಳ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಅತಿಥಿಗಳಾಗಿ ಭಾಗವಹಿಸುವರು. ಕಟೀಲು ಮೇಳದ ಕಲಾವಿದರಾದ ಗಣೇಶ್ ರೈ ಅರಳ ಹಾಗೂ ಪ್ರೇಮ್‌ರಾಜ್ ಕೊಲ ಅವರನ್ನು ಸಮ್ಮಾನಿಸಲಿದ್ದು, ಯಕ್ಷಗಾನ ಹಿಮ್ಮೇಳ ವಾದಕ ಚಂದ್ರಶೇಖರ ಭಟ್ ಕೊಂಕಣಾಜೆ ಅಭಿನಂದನಾ ಭಾಷಣ ಮಾಡುವರು. ಅನ್ನ ಸಂತರ್ಪಣೆ ಬಳಿಕ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...