ಬೆಂಗಳೂರು: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಾಹನವನ್ನು ಜಪ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಕೊರೋನ ಹಬ್ಬುತ್ತಿರುವುದನ್ನು ನಿಯಂತ್ರಿಸಲು ನೈಟ್ ಮತ್ತು ವೀಕೆಂಡ್ ಕರ್ಫ್ಯೂ ನಿಯಮ ಜಾರಿ ಮಾಡಲಾಗಿದೆ. ಈ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಜೊತೆಗೆ ಅವರ ವಾಹನವನ್ನು ಕೂಡಾ ಸೀಝ್ ಮಾಡಲಾಗುವುದು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಕಲ್ಯಾಣ ಮಂಟಪ, ಸಭಾಭವನಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here