Friday, April 19, 2024

ಮಂಗಳೂರು : ಮೀನುಗಾರಿಕಾ ಬೋಟ್ ದುರಂತ ಮೂವರು ಸಾವು, 6 ಮಂದಿ ನಾಪತ್ತೆ

ಮಂಗಳೂರು: ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಮೂವರು ಸಾವನ್ನಪ್ಪಿ, ಆರು ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯಲ್ಲಿ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.

ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...