Wednesday, April 24, 2024

ಅಕ್ರಮ ಗೋಮಾಂಸ ಸಾಗಟ: ಆರೋಪಿಯ ಬಂಧನ

ಬಂಟ್ವಾಳ: ಆಟೋ ರಿಕ್ಷಾ ಒಂದರಲ್ಲಿ ಗೋಮಾಂಸ ಸಾಗಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಡ್ಕ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ ಜಾರ್ಜ್ (35) ಬಂಧಿತ ಆರೋಪಿ. ಆರೋಪಿಯಿಂದ 30 ಕೆಜಿ ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ.

ಕೇಪು ಗ್ರಾಮದ ಸಾರಡ್ಕ ಚೆಕ್ ಪೋಸ್ಟ್ ಪೋಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೆರ್ಲ ಕಡೆಯಿಂದ ಅಡ್ಯನಡ್ಕ ಕಡೆಗೆ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ರಿಕ್ಷಾದ ಹಿಂದುಗಡೆ ಪ್ಲಾಸ್ಟಿಕ್ ಕವರ್‌ನಲ್ಲಿ ಇದ್ದ ತಲಾ 1 ಕೆಜಿಯಂತೆ 30 ಕಟ್ಟು ಗೋಮಾಂಸ ಸಹಿತ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

More from the blog

ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ: ಮತಯಾಚನೆ 

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ,...

ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಣೆ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಿಸಲಾಗಿದೆ. ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನದಲ್ಲಿ ಬರುವ ಜಿಲ್ಲೆಯ ಎಲ್ಲಾ ಮದರಸ ಗಳಿಗೆ ರಜೆ ನೀಡಲಾಗಿದೆ ಎಂದು ದ.ಕ....

ತಗ್ಗಿದ ಮಳೆ, ರಾಜ್ಯದ 10 ಜಿಲ್ಲೆಗಳಿಗೆ ಮತ್ತೆ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾದ ಬೆನ್ನಲ್ಲೇ ಇದೀಗ ತಾಪಮಾನ ಮತ್ತೆ ಏರಿಕೆಯಾಗಿದ್ದು ರಾಜ್ಯದ 10 ಜಿಲ್ಲೆಗಳಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಎ. 24ರಿಂದ 27ರ ವರೆಗೆ ರಾಯಚೂರು, ವಿಜಯಪುರ, ಯಾದಗಿರಿ,...

ಮತದಾನ-ಮತ ಎಣಿಕೆ ದಿನಗಳಂದು ಮದ್ಯ ಮಾರಾಟ ನಿಷೇಧ

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ...