Monday, April 15, 2024

ಎ.26ರಂದು ಸಜೀಪಮುನ್ನೂರು ಮೂರ್ತೆದಾರರ ಸೇ.ಸ.ಸಂಘ ವಾಮದಪದವು ಶಾಖೆ ಉದ್ಘಾಟನೆ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಇದರ ನೂತನ ವಾಮದಪದವು ಶಾಖೆಯು ವಾಮದಪದವು ಅಶ್ವಿನಿ ಕಾಂಪ್ಲೆಕ್ಸ್ನಲ್ಲಿ ಎಪ್ರಿಲ್ 26ರಂದು ಬೆಳಗ್ಗೆ 9.30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ತಿಳಿಸಿದ್ದಾರೆ.

ಮೆಲ್ಕಾರ್ ಬಿರ್ವ ಸೆಂಟರ್‌ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಮದಪದವು ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಹೊಸ್ಮಾರು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು ಸಭಾಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಸೇಫ್ ಲಾಕರನ್ನು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಕಂಪ್ಯೂಟರ್ ವ್ಯವಸ್ಥೆಯನ್ನು ಉದ್ಘಾಟಿಸುವರು. ಜಿ.ಪಂ. ಸದಸ್ಯ ಎಂ.ತುAಗಪ್ಪ ಬಂಗೇರ ಠೇವಣಿ ಪತ್ರ ಬಿಡುಗಡೆ ಮಾಡಲಿರುವರು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜಿ.ಸುಧೀರ್ ಕುಮಾರ್, ಉಪ್ಪಿನಂಗಡಿ ಮೂರ್ತೆದಾರರ ಸೇ.ಸ. ಸಂಘದ ಅಧ್ಯಕ್ಷೆ ಉಷಾ ಅಂಚನ್, ತಾ.ಪಂ. ಸದಸ್ಯರಾದ ರತ್ನಾವತಿ ಜೆ.ಶೆಟ್ಟಿ, ರಮೇಶ್ ಪೂಜಾರಿ ಕುಡುಮೇರು, ಪದ್ಮಾವತಿ ಬಿ.ಪೂಜಾರಿ, ಚೆನ್ನೆ÷Êತ್ತೋಡಿ ಗ್ರಾ.ಪಂ. ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ಕೊರಂಟಬೆಟ್ಟು, ಇರ್ವತ್ತೂರು ಗ್ರಾ.ಪಂ. ಅಧ್ಯಕ್ಷ ಎಂ.ಪಿ.ಶೇಖರ್, ಪಂಜಿಕಲ್ಲು ಗ್ರಾ.ಪಂ. ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಅಶ್ವಿನಿ ಕಾಂಪ್ಲೆಕ್ಸ್ ಮಾಲಕ ಸಂದೀಪ್ ಶೆಟ್ಟಿ ಪೊಡುಂಬ, ಉದ್ಯಮಿಗಳಾದ ಹಂಝ ಎ.ಬಸ್ತಿಕೋಡಿ, ಲಾದ್ರೂ ಮಿನೇಜಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಸಂಘವು ಮೂರ್ತೆದಾರರ ಶ್ರೇಯೋಭಿವೃದ್ಧಿ ಉದ್ದೇಶದೊಂದಿಗೆ ಮೂವತ್ತು ವರ್ಷಗಳ ಹಿಂದೆ 1991ರಲ್ಲಿ ಬಂಟ್ವಾಳ ತಾಲೂಕಿನ ಸುಭಾಷ್‌ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊAಡಿತ್ತು. 2005 ನವೆಂಬರ್ 18ರಂದು ಸಜೀಪಮೂಡ ಗ್ರಾಮದ ಬೊಳ್ಳಾಯಿಯಲ್ಲಿ ಸಂಘವು ಬ್ಯಾಂಕಿAಗ್ ವ್ಯವಹಾರವನ್ನು ಆರಂಭಿಸಿ 16 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಂಘವು ಹಾಲಿ ಆರ್ಥಿಕ ವರ್ಷದಲ್ಲಿ 35 ಕೋಟಿ ರೂ. ವ್ಯವಹಾರ ನಡೆಸಿದೆ. 3900 ಸದಸ್ಯರನ್ನು ಹೊಂದಿದೆ ಎಂದು ಅವರು ಹೇಳಿದರು.

ಪ್ರಾರಂಭದಲ್ಲಿ ಬಂಟ್ವಾಳ ತಾಲೂಕಿನ 11 ಗ್ರಾಮಗಳಾದ ಸಜೀಪಮುನ್ನೂರು, ಸಜೀಪಮೂಡ, ಅಮ್ಟೂರು, ಮಂಚಿ, ಇರಾ, ಬೋಳಂತೂರು, ಸಜೀಪನಡು, ಸಜೀಪಪಡು, ಚೇಳೂರು, ಕುರ್ನಾಡು, ಪಜೀರು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿತ್ತು. ಕಳೆದ ಸಾಲಿನಲ್ಲಿ ಬಂಟ್ವಾಳ ತಾಲೂಕಿನ 17 ಗ್ರಾಮಗಳಾದ ಕರ್ಪೆ, ಸಂಗಬೆಟ್ಟು, ಎಲಿಯನಡುಗೋಡು ಮತ್ತು ಕುಕ್ಕಿಪಾಡಿ, ರಾಯಿ, ಕೊÊಲ, ಅರಳ, ಪಂಜಿಕಲ್, ಮೂಡನಡುಗೋಡು, ಬುಡೋಳಿ, ಪಿಲಿಮೊಗರು, ಚೆನ್ನೆ÷Êತ್ತೋಡಿ, ಅಜ್ಜಿಬೆಟ್ಟು, ಕುಡಂಬೆಟ್ಟು, ಇರ್ವತ್ತೂರು, ಪಿಲಾತಬೆಟ್ಟು, ಮೂಡುಪಡುಕೋಡಿ ಗ್ರಾಮಗಳಿಗೆ ವಿಸ್ತರಣೆಗೊಂಡಿದೆ ಎಂದರು ಅವರು ತಿಳಿಸಿದರು.

ಸಹಕಾರಿಯು ಸಜೀಪಮುನ್ನೂರಿನಲ್ಲಿ ಕೇಂದ್ರ ಕಚೇರಿಯನ್ನು, ಬೋಳಂತೂರು, ಚೇಳೂರು, ಪಜೀರು ಗ್ರಾಮಗಳಲ್ಲಿ ಶಾಖೆಯನ್ನು ಹೊಂದಿದೆ. ಪ್ರಸ್ತುತ ನೂತನ 4ನೇ ಶಾಖೆಯನ್ನು ವಾಮದಪದವು ಅಶ್ವಿನಿ ಕಾಂಪ್ಲೆಕ್ಸ್ನಲ್ಲಿ ತೆರೆಯಲು ಸಿದ್ದತೆ ನಡೆಯುತ್ತಿದ್ದು ಸಂಸ್ಥೆಯು ಸಂಪೂರ್ಣ ಗಣಕೀಕೃತ ವ್ಯವಸ್ಥೆ ಹೊಂದಿದೆ. ಸದಸ್ಯರಿಗೆ ಮೂರ್ತೆದಾರಿಕೆ ಸಾಲ, ಆಭರಣ ಸಾಲ, ವಾಹನ ಸಾಲ, ವ್ಯಾಪಾರ ಸಾಲ, ಅಡವು ಸಾಲ, ಮಹಿಳೆಯರಿಗೆ ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ 25 ಸಾವಿರ ರೂ. ವಿಶೇಷ ಸಾಲ ಸೌಲಭ್ಯ ಯೋಜನೆಯನ್ನು ರೂಪಿಸಿದೆ ಎಂದು ಅವರು ಹೇಳಿದರು.

ಮುಂದಿನ ಹಂತದಲ್ಲಿ ಬಂಟ್ವಾಳ ತಾಲೂಕಿನ ಉಳಿದ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಶಾಖೆಯನ್ನು ತೆರೆಯಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಸಂಘವು ಗುರುಶ್ರೀ ಸ್ವಸಹಾಯ ಗುಂಪುಗಳ ಪ್ರಾಯೋಜಕತ್ವದಲ್ಲಿ ಒಟ್ಟು ಹತ್ತು ಸ್ವಸಹಾಯ ಗುಂಪುಗಳನ್ನು ಹೊಂದಿದೆ. ಸ್ವಸಹಾಯ ಸಂಘದ ಸದಸ್ಯರ ಆರ್ಥಿಕ ಅಭಿವೃದ್ದಿಗೆ ಸ್ವಸಹಾಯ ಸಾಲಗಳನ್ನು ನೀಡುತ್ತಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ., ಉಪ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ, ಶಾಖಾ ವ್ಯವಸ್ಥಾಪಕಿ ನಿಶ್ಮಿತಾ ಕೆ., ಆಡಳಿತ ಮಂಡಳಿ ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತ ಎಂ., ವಾಣಿ ವಸಂತ ಮೊದಲಾದವರು ಉಪಸ್ಥಿತರಿದ್ದರು.

More from the blog

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...