ದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 3,23,144 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು 2771 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾದರೆ ಸಾವಿನ ಸಂಖ್ಯೆ 1,97,894ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಗುಣಮುಖರಾಗಿದ್ದು ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,45,56,209ಕ್ಕೆ ತಲುಪಿದೆ. ದೇಶದಲ್ಲಿ ನಿನ್ನೆ 16,58,700 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು ಈವರೆಗೂ 28,09,79,877 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.