ಬೆಂಗಳೂರು: ಸಾಧಾರಣ ಜ್ವರ, ಸುಸ್ತುನಿಂದ ಬಳಲಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲವು ಕಾಲ ವಿಶ್ರಾಂತಿ ಪಡೆದ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ಅವರ ಆರೋಗ್ಯ ತಪಾಸನೆ ನಡೆಸಿದ ವೈದ್ಯರು ತಿಳಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಅಭ್ಯರ್ಥಿ ಮಂಗಳಾ ಅಂಗಡಿ ಪರ ಮತ ಯಾಚನೆಗೆ ಬೆಳಗಾವಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.
ಅವರು ತಂಗಿದ್ದ ಹೊಟೇಲ್‌ನಲ್ಲಿ ಕೆಲವು ಕಾಲ ವಿಶ್ರಾಂತಿ ಪಡೆದಿದ್ದಾರೆ. ವಿಶ್ರಾಂತಿ ಬಳಿಕ ಆರೋಗ್ಯ ಸ್ಥಿತಿ ಸುಧಾರಿಸಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.