ಬೆಂಗಳೂರು: ಜ್ವರ, ಸುಸ್ತಿನ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಪ್ರಮುಖ ಸಚಿವರು ಮತ್ತು ಹಿರಿಯ ಅಧಿಕಾರಿಗಳ ತುರ್ತು ಚರ್ಚೆ ನಡೆಸಿ ಪ್ರಮುಖ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ, ಬಳಿಕ ಜ್ವರದ ಕಾರಣದಿಂದ ಬೆಂಗಳೂರಿನ ರಾಮಯ್ಯ ಮೆಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೊರೋನ ಸೋಂದು ತಗುಲಿರುವುದು ದೃಢಪಟ್ಟಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನಗಳ ಹಿಂದೆ ಕೋವಿಡ್ ಪರೀಕ್ಷೆ ನಡೆಸಿದ ಮುಖ್ಯಮಂತ್ರಿಯ ವರದಿ ನೆಗಟಿವ್ ಬಂದಿತ್ತು. ಇಂದು ನಡೆಸಿದ ವರದಿ ಪಾಸಿಟಿವ್ ಬಂದಿದೆ. ಕಳೆದ ವರ್ಷವು ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದರು.