ದೇಶದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,84,372 ಕೊರೋನಾ ಪ್ರಕರಣ ವರದಿಯಾಗಿದೆ. ಇನ್ನು ನಿನ್ನೆ ಒಂದೇ ದಿನ 1,027 ಮಂದಿ ಬಲಿಯಾಗಿದ್ದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,72,085ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,65,704ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,84,372 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,38,73,825ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 82,339 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,23,36,036ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 14,11,758 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 26,06,18,866 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 11,11,79,578 ದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.