ಬೆಂಗಳೂರು: ಎರಡನೇ ಕೊರೋನಾ ಅಲೆಯ ಅಬ್ಬರ ರಾಜ್ಯದಲ್ಲಿ ಸತತ ಮೂರನೇ ದಿನವೂ ಮುಂದುವರಿದಿದ್ದು ಶನಿವಾರ ಈ ಮಹಾಮಾರಿ ವೈರಸ್ ಗೆ ರಾಜ್ಯದಲ್ಲಿ 80 ಮಂದಿ ಸಾವನ್ನಪ್ಪಿದ್ದಾರೆ.
ಶನಿವಾರ 17,489 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ. ಹಾಗೆಯೇ ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 13,270 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ದೈನಂದಿನ ವರದಿ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಇಂದು 43 ಸೋಂಕಿತರು ಸಾವನ್ನಪ್ಪಿದ್ದು ಅಲ್ಲಿ ಸಾವಿನ ಸಂಖ್ಯೆ 5,063 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 11,404 ಜನರಿಗೆ ಸೋಂಕು ದೃಢಪಟ್ಟಿದೆ.