ಹೊಸದಿಲ್ಲಿ: ಮಹಾ ಮಾರಿ ಕೊರೋನ ಸೋಂಕಿಗೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಪುತ್ರ ಆಶೀಷ್ ಯೆಚೂರಿ ಮೃತಪಟ್ಟಿದ್ದಾರೆ.
ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎಪ್ರಿಲ್ 22ರಂದು ಆಶೀಷ್ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಆಶೀಷ್ ಮೃತಪಟ್ಟಿದ್ದಾರೆ. ಅವರಿಗೆ 35 ವರ್ಷ ಪ್ರಾಯ.
ಈ ಬಗ್ಗೆ ಟ್ವಿಟ್ ಮಾಡಿರುವ ಸೀತಾರಾಮ್ ಯೆಚೂರಿ ಅವರು, ಕೋವಿಡ್‌ನಿಂದ ಇಂದು ಬೆಳಗ್ಗೆ ನನ್ನ ಹಿರಿಯ ಮಗನನ್ನು ಕಳೆದುಕೊಂಡಿದ್ದೇನೆ. ನನಗೆ ಭರವಸೆ ನೀಡಿದ್ದ, ಪುತ್ರನಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ಗಳು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಹಾಗೂ ನಮ್ಮೊಂದಿಗೆ ನಿಂತ ಅಸಂಖ್ಯಾತ ಜನರಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.