ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕುತ್ತಿಗೆ ಕೊಯ್ಯಲ್ಪಟ್ಟ ಸ್ಥಿತಿಯಲ್ಲಿ ರಕ್ತ ಹರಿದು ಸಾವಿಗೀಡಾಗಿರುವ ಘಟನೆ ನಡೆದಿದೆ.
ರಾತ್ರಿ ಸುಮಾರು 9.15 ರ ವೇಳೆಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿಯಲ್ಲಿ ಬಿದ್ದುಕೊಂಡಿರುವ ಬಗ್ಗೆ ಬಸ್ ನಿಲ್ದಾಣದ ಟಿ.ಸಿ.ಯವರು ಪೋಲೀಸರಿಗೆ ಮಾಹಿತಿ ನೀಡಿದರು. ಪೋಲೀಸರು ಬಂದು ನೋಡಿದಾಗ ಆ ವ್ಯಕ್ತಿ ಸಾವಿಗೀಡಾಗಿರುವುದು ತಿಳಿದು ಬಂದಿದೆ.
ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್ ನ ಆಧಾರದಲ್ಲಿ ಈ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬವರೆAದು ತಿಳಿದು ಬಂದಿದೆ ಎನ್ನಲಾಗಿದೆ.
ಪೋಲೀಸರು ಮೃತದೇಹವನ್ನು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದು ಶವಾಗಾರದಲ್ಲಿ ಇರಿಸಿದ್ದು, ಈ ವ್ಯಕ್ತಿಯ ಸಾವು ಹೇಗೆ ಸಂಭವಿಸಿತೆAಬುದು ಖಚಿತ ಮಾಹಿತಿ ಲಭ್ಯವಾಗಿಲ್ಲ. ಇದು ಕೊಲೆಯೇ ಆತ್ಮಹತ್ಯೆಯೇ ಅಥವಾ ಬೇರೆ ಏನಾದರೂ ರೀತಿಯಲ್ಲಿ ಸಾವು ಸಂಭವಿಸಿರಬಹುದೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.