ದೆಹಲಿ: ಕೋವಿಡ್ – 19 ವೈರಸ್‌ನ ಎರಡನೆ ಅಲೆಗೆ ದೇಶದ ರಾಜಧಾನಿ ದೆಹಲಿ ತತ್ತರಿಸಿದ್ದು ದೆಹಲಿಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಶುಕ್ರವಾರ ರಾತ್ರಿ ೧೦ ಗಂಟೆಯಿAದ ಸೋಮವಾರ ಬೆಳಗ್ಗೆ ೫ ಗಂಟೆಯವರೆಗೆ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಬಂದ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.