ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸರಕಾರದ ಆದೇಶದಂತೆ ಎಪ್ರಿಲ್ 21ರಿಂದ ಮೊದಲ್ಗೊಂಡು ಮೇ 4ರ ಬೆಳಗ್ಗೆ 6 ಗಂಟೆಯವರೆಗೆ ಭಕ್ತರ ಭೇಟಿಯನ್ನು ನಿಷೇಧಿಸಲಾಗಿದೆ. ಕ್ಷೇತ್ರದ ಸಂಪ್ರದಾಯ ಪ್ರಕಾರ ನಿತ್ಯ ಪೂಜಾ ವಿಧಿ ವಿಧಾನಗಳು ದೇಗುಲದ ಒಳಗೆ ನಡೆಯಲಿದೆ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.