ಕಡಬ: ಯುವಕರಿಬ್ಬರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬದ ಇಚಿಲಂಪಾಡಿಯಲ್ಲಿ ಸಂಭವಿಸಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ.
ಮೃತ ಯುವಕರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.