ಶ್ರೀ ರಾಮ ಭಜನಾ ಮಂದಿರ ಕಜೆ ಇದರ ದಶಮಾನೋತ್ಸವ ಸಮಾರಂಭದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ವೇದಮೂರ್ತಿ ಸುಬ್ರಹ್ಮಣ್ಯ ಭಟ್ ಪುಚ್ಚೆಕೆರೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಸೂರ್ಯ ನಾರಾಯಣ ರಾವ್ ಪತ್ತುಮುಡಿ, ಜಗನ್ನಾಥ ಚೌಟ ಬದಿಗುಡ್ಡೆ, ಲಯನ್ ಮನೋರಂಜನ್ ಕರೈ, ಗಣೇಶ ಐತಾಳ್ ಚೌಕದ ಪಾಲು, ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಉಮನಾಥ ರೈ ಮೇರಾವು, ಭಜನಾ ಮಂದಿರದ ಅಧ್ಯಕ್ಷರಾದ ಪುರುಷೋತ್ತಮ ಪೂಜಾರಿ ಕೋಮಾಲಿ ಪಡೀಲ್ ಇದ್ದರು ದಶಮಾನೋತ್ಸವ ಸಮಿತಿಯ ಕಾರ್ಯದರ್ಶಿ ಕೇಶವರಾವ್ ನೂಜಿಪ್ಪಾಡಿ ಸ್ವಾಗತಿಸಿದರು ಭಜನಾ ಮಂದಿರದ ಕಾರ್ಯದರ್ಶಿ ಜಯಪ್ರಕಾಶ್ ರೈ ಮೇರಾವು ವಂದಿಸಿದರು. ದಶಮಾನೋತ್ಸವ ಸಮಿತಿಯ ಕೋಶಾಧಿಕಾರಿ ಚಂದ್ರಹಾಸ ರೈ ಬಾಲಾಜಿ ಬೈಲು ಕಾರ್ಯಕ್ರಮ ನಿರೂಪಿಸಿದರು.