ಮಂಗಳೂರು: ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಿಂದಾಗಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಅರ್ಧಕ್ಕೆ ರದ್ದು ಮಾಡಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಜಾತ್ರೋತ್ಸವ ಆಚರಣೆಗೆ ನಿರ್ಧರಿಸಲಾಗಿತ್ತು. ಆದರೆ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಜಾತ್ರೋತ್ಸವ ಅರ್ಧಕ್ಕೆ ನಿಲ್ಲಿಸಲಾಗಿದೆ.
ಸೋಮವಾರ ಮಂಗಳೂರು ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಸರ್ಕಾರದ ಆದೇಶದಂತೆ ಜಾತ್ರೋತ್ಸವ ಆಚರಣೆ ರದ್ದು ಮಾಡಲು ಸೂಚನೆ ನೀಡಿದ್ದರು ಎನ್ನಲಾಗಿದೆ.