ಬಂಟ್ವಾಳ: ಕರಾವಳಿಯಾದ್ಯಂತ ಕಾರುಣ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ತಾಜುಲ್ ಉಲಮಾ ರಿಲೀಫ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಇದರ ವತಿಯಿಂದ ಆಯ್ದ 325 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ ಕಾವಳಕಟ್ಟೆ ಅಲ್ ಖಾದಿಸಾ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು.
ಸಯ್ಯದ್ ನಿಜಾಮುದ್ದೀನ್ ಬಾಫಖಿ ತಂಙಳ್ ಕೊಯಿಲಾಂಡಿ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಅವರು ಉದ್ಘಾಟಿಸಿದರು. ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಟ್ರಸ್ಟ್ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ವಗ್ಗ, ಉಪಾಧ್ಯಕ್ಷ ಅಬ್ದುಲ್ ಹಮೀದ್ ಪುಂಜಾಲಕಟ್ಟೆ, ಕಾರ್ಯದರ್ಶಿ ರಾಝಿಕ್ ಬಿಎಂ ಮುಂತಾದವರು ಉಪಸ್ಥಿತರಿದ್ದರು. ಸಿದ್ದೀಕ್ ಜಾರಿಗೆಬೈಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.