ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ರಾತ್ರಿ ಕರ್ಪ್ಯೂ, ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿದ್ದರೂ ಕೊರೋನ ಪ್ರಕರಣ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ರಾಜ್ಯ ಸರಕಾರ ಮುಂದಿನ 15 ದಿನ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಸೋಮವಾರ (ಇಂದು) ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರಕಾರ ಲಾಕ್‌ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಲಸಿಕೆ ಕಾರ್ಯಕ್ರಮದ ಬಗ್ಗೆ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.
ಇಡೀ ದೇಶದಲ್ಲಿ ಅತೀ ಹೆಚ್ಚು ಕೊರೋನ ಸೋಂಕು ಪಾಸಿಟಿವ್ ಆಗುತ್ತಿರುವ ಬೆಂಗಳೂರಿನಲ್ಲಿ ಕನಿಷ್ಠ 2 ವಾರ ಲಾಕ್ ಡೌನ್ ಮಾಡಲೇಬೇಕು ಎಂದು ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆಯೂ ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ.