ಬೆಂಗಳೂರು: ಕೊರೋನಾ ಎರಡನೇ ಅಲೆ ಜೋರಾಗಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ರಾಜ್ಯಾದ್ಯಂತ ವಾರಾಂತ್ಯ ಕಫ್ರ್ಯೂ ಹಾಗೂ ರಾತ್ರಿ ಕರ್ಫ್ಯೂ ವಿಧಿಸಿ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಹೊರಡಿಸಿದೆ.
ಮಂಗಳವಾರ ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆಯ ಬಳಿಕ ಈ ಹೊಸ ಮಾರ್ಗಸೂಚಿ ಹೊರಡಿಸಲಾಗಿದ್ದು ಈ ಆದೇಶ ಮೇ 4 ರವರೆಗೆ ಜಾರಿಯಲ್ಲಿರಲಿದೆ. ಆ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಆದೇಶದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಇರಲಿದೆ. ವೀಕೆಂಡ್ ಕರ್ಫ್ಯೂ ದಿನ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಹಣ್ಣು, ತರಕಾರಿ, ದಿನಸಿ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ.
ಮೇ 4ರವರೆಗೆ ಶಾಲಾ – ಕಾಲೇಜುಗಳು, ಸಿನಿಮಾ ಥಿಯೇಟರ್ ಗಳು, ಕ್ರೀಡಾಂಗಣ, ಪಾರ್ಕ್, ದೇವಸ್ಥಾನ, ಮಸೀದಿ, ಚರ್ಚ್ ಹಾಗೂ ಶಾಪಿಂಗ್ ಮಾಲ್‍ಗಳು ಬಂದ್ ಆಗಲಿದ್ದು ಸೆಲೂನ್, ಬ್ಯೂಟಿ ಪಾರ್ಲರ್ ಳಿಗೆ ಅವಕಾಶ ನೀಡಲಾಗಿದೆ. ವೈನ್ ಸ್ಟೋರ್ ಹಾಗೂ ಹೊಟೇಲ್‍ಗಳಲ್ಲಿ ಪಾರ್ಸೆಲ್‍ಗೆ ಅವಕಾಶ ನೀಡಲಾಗಿದೆ.
ಮದುವೆ ಸಮಾರಂಭಕ್ಕೆ 50 ಹಾಗೂ ಅಂತ್ಯ ಸಂಸ್ಕಾರಕ್ಕೆ 20 ಜನ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದೆ. ಕರ್ಫ್ಯೂ ಸಂದರ್ಭ ಸಂಚರಿಸಲು ಯಾರಿಗೂ ಪಾಸ್ ವ್ಯವಸ್ಥೆ ಇರುವುದಿಲ್ಲ. ಲಸಿಕೆ ಹಾಕಲು ತೆರಳುವವರಿಗೆ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು ಇದನ್ನು ಅಧಿಕಾರಿಗಳ ಜೊತೆ ದೃಢೀಕರಿಸಬೇಕಾಗಿದೆ.
ನೈಟ್ ಕರ್ಪ್ಯೂ ಸಮಯದಲ್ಲಿ ಕೂಡ ಬದಲಾವಣೆ ಮಾಡಲಾಗಿದೆ. ರಾತ್ರಿ 10ರ ಬದಲು ರಾತ್ರಿ 9 ಗಂಟೆಯಿಂದಲೇ ಕರ್ಫ್ಯೂ ಆರಂಭವಾಗಿ ಬೆಳಗ್ಗೆ 6 ಗಂಟೆವೆರೆಗೆ ಜಾರಿಯಲ್ಲಿರಲಿದೆ. ವಾರಾಂತ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಿದ್ದು ಅನಗತ್ಯವಾಗಿ ಯಾರೂ ಹೊರಗೆ ಬರುವಂತಿಲ್ಲ.
ಮದುವೆ ಮಂಟಪಕ್ಕೆ 50 ಜನ, ಅಂತ್ಯಸಂಸ್ಕಾರ ಕ್ಕೆ 20 ಜನಕ್ಕೆ ಅವಕಾಶ. ಸಿನಿಮಾ ಹಾಲ್ಗಳು, ಶಾಪಿಂಗ್ ಮಾಲ್‍ಗಳು, ಜಿಮ್, ಯೋಗಾ ಸೆಂಟರ್, ಸ್ವಿಮ್ಮಿಂಗ್ ಪೂಲ್, ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ಪಾ, ಬಾರ್, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು.
ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾದಿಂದ ಅನುಮತಿ ಪಡೆದ ಕ್ರೀಡಾಪಟುಗಳಿಗಾಗಿ ಸ್ವಿಮ್ಮಿಂಗ್ ಫೂಲ್ಗಳನ್ನು ಮಾತ್ರ ತೆರೆಯಲು ಅನುಮತಿ.
ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ. ದೇವಸ್ಥಾನ ಸೇರಿ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು.
ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ ಮಾತ್ರಕ್ಕೆ ಅವಕಾಶ.ಮದ್ಯದ ಅಂಗಡಿಗಳು ಕೂಡ ಬಂದ ಆಗಲಿದೆ. ಬಾರ್‌ಗಳಲ್ಲಿ ಕುಳಿತು ಮದ್ಯ ಸೇವಿಸಲು ಅವಕಾಶವಿಲ್ಲ. ಆದರೆ ಮದ್ಯವನ್ನು ಪಾರ್ಸಲ್ ಪಡೆಯಲು ಅವಕಾಶವಿದೆ.
ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ. ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ. ಆಹಾರ ಸಂಬಂಧಿ ಅಂಗಡಿಗಳು, ದಿನಸಿ ಅಂಗಡಿ, ಹಣ್ಣು ತರಕಾರಿ ಅಂಗಡಿ, ಡೇರಿ, ಮಿಲ್ಕ್ ಬೂತ್, ಮೀನು ಮಾಂಸದ ಅಂಗಡಿ ತೆರೆಯಲು ಅನುಮತಿ. ವಾರಂತ್ಯದ ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ, ಹಾಲು ಅಂಗಡಿಗಳಿಗೆ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಅವಕಾಶ.
ಲಾಡ್ಜ್ ಗಳನ್ನು ತೆರೆದಿಡಲು ಅನುಮತಿ. ಬ್ಯಾಂಕ್, ಇನ್ಶೂರೆನ್ಸ್ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ. ಇ ಕಾಮರ್ಸ್ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ. ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರೆತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ.
ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ. ಸರ್ಕಾರಿ ಕಚೇರಿಗಳಲ್ಲಿ ಶೇ. 50 ಸಿಬ್ಬಂದಿ ಕೆಲಸಕ್ಕೆ ಅನುಮತಿ. ಜಿಲ್ಲೆಗಳ ನಡುವೆ ಮತ್ತು ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಮೆಟ್ರೋ, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ.