Monday, April 8, 2024

ರಾಜ್ಯದಲ್ಲಿ ವಾರ ಪೂರ್ತಿ ಲಾಕ್‌ಡೌನ್‌ಗೆ ಸರಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರಕ್ಕೆ ಮುಂದಾಗಿರುವ ರಾಜ್ಯ ಸರಕಾರ ವಾರ ಪೂರ್ತಿ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ ರಾಜ್ಯ ಸರಕಾರದ ಮಾರ್ಗಸೂಚಿ ಪ್ರಕಾರ ವಾರದ ಎಲ್ಲಾ ದಿನ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿದೆ. ಹಾಗೆಯೇ ಶನಿವಾರ ಮತ್ತು ರವಿವಾರ ಇಡೀ ದಿನ ಕರ್ಫ್ಯೂ ಜಾರಿ ಮಾಡಿದೆ. ಆದರೂ ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ವಾರ ಪೂರ್ತಿ ಲಾಕ್‌ಡೌನ್ ಮಾಡುವ ಚಿಂತನೆಯನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ರಾಜ್ಯದಲ್ಲಿ ವೀಕೆಂಡ್ ಮಾತ್ರವಲ್ಲ ವಾರಪೂರ್ತಿ ಕರ್ಫ್ಯೂ ಹೇರಿದರೆ ಒಳ್ಳೆಯದು ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಜನ ಕೇಳಬೇಕಲ್ಲ. ವಾರವಿಡೀ ಕರ್ಫ್ಯೂ ಜಾರಿ ಮಾಡುವುದು ಬೇಡವೆಂದು ಹೇಳಲಾಗುತ್ತಿದೆ. ಕೆಲವರು ಆರಾಮಾಗಿ ಓಡಾಡಿಕೊಂಡಿದ್ದಾರೆ. ಜನ ಸಾಯುತ್ತಿದ್ದರೂ ಕೆಲವರಿಗೆ ಚಿಂತೆ ಇಲ್ಲ ಎಂದು ಹೇಳಿದ್ದಾರೆ.

ಸರ್ಕಾರ ವಾರದ ಎಲ್ಲಾ ದಿನವೂ ಲಾಕ್ ಡೌನ್ ಮಾಡುವ ಚಿಂತನೆ ಹೊಂದಿತ್ತು. ಪರಿಸ್ಥಿತಿ ರಾಜ್ಯದಲ್ಲಿ ಮತ್ತಷ್ಟು ಕೈಮೀರಿ ಹೋದರೆ ವಾರಪೂರ್ತಿ ಲಾಕ್ಡೌನ್ ಮಾಡುವ ಸಾಧ್ಯತೆ ಇದೆ. ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋದರೆ ಆಗ ವಾರಪೂರ್ತಿ ಲಾಕ್ಡೌನ್ ಜಾರಿಯಾದರೆ ಅಚ್ಚರಿಪಡಬೇಕಿಲ್ಲ. ಸೋಮವಾರದಿಂದ ನೈಟ್ ಕರ್ಫ್ಯೂ ಮಾತ್ರ ಇರುತ್ತದೆ. ಸೋಮವಾರ ಸಂಪುಟ ಸಭೆ ನಡೆಯಲಿದ್ದು, ವಾರ ಪೂರ್ತಿ ಕರ್ಫ್ಯೂ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದು ಎನ್ನಲಾಗಿದೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...