ಬಂಟ್ವಾಳ: ಕೊರೋನ ಸೋಂಕು ನಿಭಾಯಿಸುವ ನಿಟ್ಟಿನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಇಲಾಖೆಗಳ ಸಭೆ ನಡೆಯಿತು.
ತಾಲೂಕಿನಲ್ಲಿ ಕೋವಿಡ್ ಎರಡನೇ ಅಲೆ ಪ್ರಾಥಮಿಕ ಹಂತದಲ್ಲಿದ್ದು ಈ ಹಂತದಲ್ಲೇ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ರಾಜ್ಯ ಸರಕಾರದಿಂದ 18 ವರ್ಷದ ವಯೋಮಿತಿಯವರಿಗೆ ಉಚಿತವಾಗಿ ಲಸಿಕಾಕರಣ ನಡೆಯಲಿದ್ದು ಈ ಅಭಿಯಾನವನ್ನು ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಶಾಸಕರು ಚರ್ಚಿಸಿದರು.