Sunday, April 7, 2024

ಮಾಣಿ ಗ್ರಾಪಂ ಕೋವಿಡ್ ಟಾಸ್ಕ್ ಫೋರ್ಸ್ ಸಭೆ

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆಯು ಅತ್ಯಂತ ತೀಕ್ಷ್ಣತೆಯನ್ನು ಹೊಂದಿದ್ದು ನಗರಪ್ರದೇಶಗಳಲ್ಲಿ ಶರವೇಗದಲ್ಲಿ ಹರಡುತ್ತಿದೆ. ಎಲ್ಲರೂ ಜಾಗರೂಕರಾಗಿರಬೇಕು ಎಂದು ಹೇಳಿದರು.

ಕೋವಿಡ್ ಕಾರ್ಯಪಡೆಯ ಸದಸ್ಯರಾಗಿರುವ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಕೋವಿಡ್ ನ ಪರಿಣಾಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಕಾಣಿಸಿಕೊಂಡಿಲ್ಲ, ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದು ಕೊರೋನ ರಹಿತ ಗ್ರಾಮವಾಗುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ದೂರದ ಊರುಗಳಿಂದ ಹಿಂದಿರುಗಿರುವವರ ಮನವೊಲಿಸಿ ಕಲವು ದಿನ ಅವರು ಮನೆಯಲ್ಲಿಯೇ ಇದ್ದು ಬೇರೆಯವರ ಸಂಪರ್ಕ ಮಾಡದ ಹಾಗೆ ವಿನಂತಿಯನ್ನು ಮಾಡಬೇಕು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಾಧಿಕಾರಿ ಡಾ. ಶಶಿಕಲಾರವರು ಮಾತನಾಡಿ, ಕೋವಿಡ್ ಲಸಿಕೆಯನ್ನು ಪಡೆಯುವುದರಿಂದ ದೇಹದ ಸಾಮರ್ಥ್ಯ ವನ್ನು ಹೆಚ್ಚಿಸಿಕೊಂಡು ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು. ಇದರ ಬಗ್ಗೆ ಜನರಿಗೆ ತಿಳಿಸಬೇಕು ಮತ್ತು ಕೋವಿಡ್ ಲಸಿಕೆಗೆ ಕೆಲವು ದಿನಗಳಿಂದ ಬಹಳಷ್ಟು ಬೇಡಿಕೆ ಉಂಟಾಗಿದೆ. ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವ ಹಾಗೆ ಮಾಡಬೇಕು ಎಂದು ಹೇಳಿದರು.

ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ರವರು ಮಾತನಾಡಿ, ಪ್ರತೀ ಗ್ರಾಮಗಳಲ್ಲಿ ಶಿಕ್ಷಕರಿಗೆ ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿಯನ್ನು ನೀಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೆಲಸನಿರ್ವಹಿಸಲು ಅವರಿಗೆ ಪಂಚಾಯತ್ ನಿಂದ ಗುರುತಿನ ಚೀಟಿಯನ್ನು ನೀಡುವಂತೆ ವಿನಂತಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ ಕೆ.ಮಾಣಿ, ರಮಣಿ ಡಿ.ಪೂಜಾರಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಮಿತ್ರಾಕ್ಷಿ, ಗ್ರಾಮಕರಣಿಕರಾದ ಸುರಕ್ಷಾ, ಆರೋಗ್ಯ ಸಹಾಯಕಿ ಭಾರತಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿಯವರು ಸ್ವಾಗತಿಸಿದರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...