Friday, April 5, 2024

ಟಿಎಂಸಿ ನಾಯಕಿಯಿಂದ ಪರಿಶಿಷ್ಟ ಜಾತಿಯವರ ಅಪಮಾನ: ದ.ಕ. ಎಸ್ಸಿ ಮೋರ್ಚಾದಿಂದ ಡಿಸಿಗೆ ಮನವಿ

ಮಂಗಳೂರು: ಪರಿಶಿಷ್ಟ ಜಾತಿಯವರನ್ನು ಅಪಮಾನಿಸಿದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಸುಜಾತ ಮಂಡಲ್ ಖಾನ್ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ವಿನಯ ನೇತ್ರ ದಡ್ಡಲಕಾಡು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಟಿಎಂಸಿ ನಾಯಕಿ ಸುಜಾತ ಮಂಡಲ್ ಖಾನ್ ತನ್ನ ಭಾಷಣದಲ್ಲಿ, ‘ಪರಿಶಿಷ್ಟ ಜಾತಿಯವರು ಬೇಡುವ ಭಿಕ್ಷುಕರು’ ಎಂದು ಹೇಳಿ ಪರಿಶಿಷ್ಟ ಜನಾಂಗದವರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಸಂದರ್ಭದಲ್ಲೇ ಈ ಹೇಳಿಕೆ ಕೊಟ್ಟಿರುವುದು ದುರದೃಷ್ಟಕರ. ಸುಜಾತ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಹೆಳಿಕೆಯನ್ನು ರಾಜ್ಯ ಎಸ್ಸಿ ಮೋರ್ಚದ ರಾಜ್ಯ ಕಾರ್ಯಕಾರಿಣಿ ಸದಸ್ಯ, ಮಂಗಳೂರು, ಉಡುಪಿ, ಹಾಸನದ ಸಹ ಪ್ರಭಾರಿ ದಿನೇಶ್ ಅಮ್ಟೂರ್ ಕೂಡಾ ತೀವ್ರವಾಗಿ ಖಂಡಿಸಿದ್ದಾರೆ.

ಜಿಲ್ಲಾಧಿಕಾರಿಯವರ ಅನುಪಸ್ಥಿತಿಯಲ್ಲಿ ಚುನಾವಣಾಧಿಕಾರಿ ಶಿವಕುಮಾರ್ ಮನವಿ ಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮನೋಜ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯೂ ಆದ ಎಸ್ಸಿ ಮೋರ್ಚಾದ ಪ್ರಭಾರಿ ಮಂಗಳ ಆಚಾರ್ಯ ಹಾಗೂ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಿಏಳ್ತಿಮಾರ್, ಭೋಜರಾಜ ಕೋಟ್ಯಾನ್, ಪ್ರಕಾಶ್ ಸಿಂಪೋನಿ, ಗಣೇಶ್ ಸೂಟರ್ ಪೇಟೆ ಹಾಗೂ ಪರಿಶಿಷ್ಟ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...