Friday, April 5, 2024

ಬಿ.ಸಿ.ರೋಡಿನಲ್ಲಿ ಚೂರಿ ಇರಿತ

ಬಂಟ್ವಾಳ: ಬೈಕಿನಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳಿಂದ ಯುವಕನೋರ್ವನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಬ್ರಹ್ಮರಕೋಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಎಂಬಾತ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ.

ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಯುವಕನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ತುಂಬೆಯಿಂದ ಮನೋಜ್ ಅವರು ಬಿಸಿರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿ ಗಳು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದರು.

ಇದನ್ನು ಗಮನಿಸಿ ದ ಮನೋಜ್ ಬಿಸಿರೋಡಿಗೆ ಆಗಮಿಸುತ್ತಿದ್ದಂತೆ ಅಜ್ಜಿಬೆಟ್ಟು ಕ್ರಾಸ್‌ ನೊಳಗೆ ಬೈಕನ್ನು ತಿರುಗಿಸಿ ಅಂಗಡಿಯೊಂದರ ಮುಂಭಾಗದಲ್ಲಿ ನಿಲ್ಲಿಸಿ ದರು.

ಆದರೆ ಬೈಕಿನಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳು ನಿಲ್ಲಿಸದಲ್ಲೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡ ಮನೋಜ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೋಜ್ ಅವರು ವಿದೇಶದಲ್ಲಿ ಸಿವಿಲ್ ಇಂಜಿನಿಯರಿಂಗ್ ಉದ್ಯೋಗ ದಲ್ಲಿ ದ್ದು ಎರಡು ವಾರಗಳ ಹಿಂದೆಯಷ್ಟೆ ಊರಿಗೆ ಬಂದಿದ್ದರು.

ಎಪ್ರಿಲ್ ಅಂತ್ಯದಲ್ಲಿ ಮದುವೆ ನಿಶ್ಚಿಯವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

 

*ಆರೋಪಿ ಪತ್ತೆ ಮಾಡಿ : ಶಾಸಕ ರಾಜೇಶ್ ನಾಯ್ಕ್ ಎಸ್.ಪಿ.ಗೆ ಸೂಚನೆ.*

ಘಟನೆ ನಡೆದ ವಿಷಯ ತಿಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಇರಿತಕ್ಕೊಳಗಾದ ಮನೋಜ್ ಅವರಿಗೆ ಚಿಕಿತ್ಸೆ ನೀಡುವುದರ ಬಗ್ಗೆ ಅಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.

ಗಾಯಗೊಂಡಿರುವ ಮನೋಜ್ ಅವರ ಸ್ಥಿತಿಯ ತಿಳಿಸಿದ ವೈದ್ಯರು ಪ್ರಾಣ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಕಾರಣ ಸ್ಪಷ್ಟವಾಗಿ ತಿಳಿದಿಲ್ಲ.

ವೈಯಕ್ತಿಕ ಕಾರಣದಿಂದ ಚೂರಿ ಇರಿತ ಸಾಧ್ಯ ತೆ ಇದೆ ಎಂಬ ಬಗ್ಗೆ ಮಾಹಿತಿ ಇದ್ದು ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಶಾಸಕರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಅವರಿಗೆ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ಚೆಲುವರಾಜ್ ಬೇಟಿ ನೀಡಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...