ಮಂಗಳೂರು ಏ. 09: ಉಡುಪಿ ಸೇರಿದಂತೆ 7 ಜಿಲ್ಲೆಗಳ ಎಂಟು ನಗರಗಳಲ್ಲಿ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೊಷಿಸಿದ್ದಾರೆ.
ಶನಿವಾರ ರಾತ್ರಿಯಿಂದ 10 ದಿನಗಳ ಕಾಲ ಕೊರೋನಾ ಕರ್ಫ್ಯೂ ಜಾರಿಯಲ್ಲಿರಲಿದೆ. ರಾಜ್ಯದ 7 ನಗರಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ರಾತ್ರಿ ಜನರ ಓಡಾಟಕ್ಕೆ ಮಾತ್ರ ನಿರ್ಭಂಧ ವಿಧಿಸಲಾಗಿದೆ. ಉಡುಪಿ, ಉಡುಪಿ ಜಿಲ್ಲೆಯ ಮಣಿಪಾಲ ನಗರ, ಬೆಂಗಳೂರು, ಮಂಗಳೂರು, ತುಮಕೂರು, ಕಲಬುರ್ಗಿ, ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ ಹೆಸರಿನಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ.
ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಜನರ ಓಡಾಟಕ್ಕೆ ನಿಷೇಧ ವಿಧಿಸಲಾಗಿದೆ. ಪ್ರಧಾನಿ ಮೋದಿಯವರೊಂದಿಗೆ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇನ್ನು ಮದುವೆ ಸಮಾರಂಭಗಳಿಗೆ ಇತಿಮಿತಿ ಇರಬೇಕು ಎಂದು ಸಿಎಂ ತಿಳಿಸಿದ್ದಾರೆ. ಏಪ್ರಿಲ್ 10 ರಿಂದ ಏ.20 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.