Saturday, April 6, 2024

ಕಲ್ಲಡ್ಕ ಪೇಟೆಯ ಸ್ವಚ್ಚತೆ

ಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಯವರ ಷಷ್ಠಬ್ದ್ಯ ಸಮಾರಂಭ ದ ಪ್ರಯುಕ್ತ ಕಲ್ಲಡ್ಕ ವಲಯ ಸಮಿತಿಯ ನೇತೃತ್ವದಲ್ಲಿ ಕಲ್ಲಡ್ಕ ಪೇಟೆಯ ಸ್ವಚ್ಚತೆ ಕಾರ್ಯಕ್ರಮವು ಕಲ್ಲಡ್ಕ ಆಸುಪಾಸಿನ ಎಲ್ಲಾ ಸಂಘಟನೆಗಳ ಕೂಡುವಿಕೆಯಿಂದ ಇಂದು ರವಿವಾರ ಜರುಗಿತು.

ಹೋಟೆಲ್ ಲಕ್ಷ್ಮೀ ಗಣೇಶ್ ನ ಮಾಲಕರಾದ ರಾಜೇಂದ್ರ ಹೊಳ್ಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಷ್ಟ್ರ ಸೇವಿಕ ಸಮಿತಿಯ ಕಮಲ ಪ್ರಭಾಕರ ಭಟ್ ಮತ್ತು ಜಿಲ್ಲಾಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿಯವರು ಶುಭ ಹಾರೈಸಿದರು. ಷಷ್ಠಬ್ದ್ಯ ಮಾತೃ ಸಮಿತಿಯ ಗೌರವ ಅಧ್ಯಕ್ಷರಾದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿ ಮಾರ್ಗದರ್ಶನ ಮಾಡಿದರು. ಷಷ್ಠಬ್ದ್ಯ ವಲಯ ಸಮಿತಿಯ ಅಧ್ಯಕ್ಷರಾದ ರಾಧಕೃಷ್ಣ ಆಡ್ಯಂತಾಯ, ಬಾಳ್ತೀಲ ಪಂಚಾಯತ್ ಅಧ್ಯಕ್ಷರಾದ ಹಿರಣ್ಮಯಿ ಗೋಳ್ತಮಜಲು ಪಂಚಾಯತ್ ಅಧ್ಯಕ್ಷರಾದ ಅಭಿಷೇಕ್ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀ ರಾಮ ಮಂದಿರ ಕಲ್ಲಡ್ಕ, ರಾಷ್ಟ್ರೀಯ ಸ್ವಯಂಸೇವಕ ಸಂಘ, ರಾಷ್ಟ್ರ ಸೇವಿಕ ಸಮಿತಿ, ವಿ.ಹಿಂ.ಪ ಮತ್ತು ಬಜರಂಗದಳ ಕಲ್ಲಡ್ಕ ವಲಯ, ಹಿಂದೂ ಜಾಗರಣ ವೇದಿಕೆ ಕಲ್ಲಡ್ಕ ವಲಯ, ಗೋಳ್ತಮಜಲು ಗ್ರಾಮ ಪಂಚಾಯತ್, ಬಾಳ್ತೀಲ ಗ್ರಾಮ ಪಂಚಾಯತ್, ಒಡಿಯೂರು ಸ್ವ ಸಹಾಯ ಗುಂಪುಗಳು ಕಲ್ಲಡ್ಕ ವಲಯ, ಶ್ರೀ ಶಾರದ ಸೇವಾ ಪ್ರತಿಷ್ಠಾನ ಕಲ್ಲಡ್ಕ, ನೇತಾಜಿ ಯುವಕ ಮಂಡಲ ಕಲ್ಲಡ್ಕ, ಓಂ ಶಕ್ತಿ ಪ್ರೆಂಡ್ಸ್ ಕಲ್ಲಡ್ಕ, ಉತ್ಸಾಹಿ ತರುಣ ವೃಂದ ಬೊಂಡಾಲ, ಬಿಲ್ಲವ ಸಂಘ ಕಲ್ಲಡ್ಕ, ಝಾನ್ಸಿ ಮಹಿಳಾ ಮಂಡಲಿ ಕಲ್ಲಡ್ಕ, ಪತಂಜಲಿ ಯೋಗ ತರಗತಿಯ ಸದಸ್ಯರು ಸ್ವಯಂಸೇವಕರಾಗಿ ಬಾಗವಹಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...