ಬೆಂಗಳೂರು: ಕೊರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪರೀಕ್ಷೆಗಳನ್ನು ನಡೆಸದೆ 1ರಿಂದ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವಂತೆ ರಾಜ್ಯ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ರಜೆಯಲ್ಲಿ ಇದ್ದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ದಿನಾಂಕವನ್ನು ಕೆಲವೇ ದಿನಗಳಲ್ಲಿ ತಿಳಿಸುವುದಾಗಿ ಶಿಕ್ಷಣ ಸಚಿವರು ಇತ್ತೀಚೆಗೆ ಹೇಳಿದ್ದರು. ಆದರೆ 1ರಿಂದ 9ನೇ ತರಗತಿಯ ವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಲು ಆದೇಶ ಹೊರಡಿಸಿದ್ದಾರೆ.