ಪುತ್ತೂರು: ತಾಲೂಕಿನ ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೇಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಇಂಟರ್‌ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮೂವರಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸನೆ ನಡೆಸುವ ಕಾರ್ಯ ನಡೆಯುತ್ತಿದ್ದು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ತೆರಳಿದ್ದಾರೆ.