ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿ ಅವರ ನೇತೃತ್ವದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ವತಿಯಿಂದ, ಕೆ.ಎಸ್.ಹೆಗ್ಡೆ ಆಸ್ಪತ್ರೆ ಅವರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ರಕ್ತದಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ನೀಡಲಿರುವುದರಿಂದ ವಾಕ್ಸಿನ್ ಪಡೆದವರು ಮುಂದಿನ 60 ದಿನಗಳ ಕಾಲ ರಕ್ತದಾನ ಮಾಡುವುದು ನಿಷಿದ್ಧವಾಗಿರುತ್ತದೆ. ಈ ಸಮಯದಲ್ಲಿ ರಕ್ತದ ಕೊರತೆಯನ್ನು ನೀಗಿಸಲು ಈ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಇದೆ ರೀತಿ ಪ್ರತಿ ವಾರವೂ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.