Friday, April 5, 2024

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಿಂದ ಸರಳ ಸಾಮೂಹಿಕ ವಿವಾಹ ಸಮಾರಂಭ

 

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 37ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 13ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭವು ಎ.25ರಂದು ಸರಳ ರೀತಿಯಲ್ಲಿ ಕೋವಿಡ್ ನಿಯಮಾನುಸಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪುಂಜಾಲಕಟ್ಟೆಯ ಬಂಗ್ಲೆ ಮೆದಾನದಲ್ಲಿ ನೆರವೇರಿತು.

ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು 16 ಜೋಡಿ ಹಸೆಮಣೆ ಏರಿದ್ದು 8 ಜೋಡಿಗಳ ತಲಾ ಎರಡು ವಿಭಾಗ ಮಾಡಿ ಮೊದಲ ಜೋಡಿಗಳ ವಿವಾಹ ಕಾರ್ಯ ಮುಗಿದ ತಕ್ಷಣ ಊಟ ಕೊಡಿಸಿ ಕಳುಹಿಸಲಾಗಿತ್ತು. ಬಳಿಕ 2ನೇ ತಂಡದ ವಿವಾಹ ಕಾರ್ಯ ನಡೆಯಿತು.

ಹಸೆಮಣೆ ಏರಿದ ಜೋಡಿಗಳ ಜತೆಗೆ ಒಂದಿಬ್ಬರು ಸಂಬಂಧಿಗಳಿಗೆ ಮಾತ್ರ ಮದುವೆ ನಡೆಯುತ್ತಿದ್ದ ಮೈದಾನಕ್ಕೆ ಅವಕಾಶ ನೀಡಲಾಗಿತ್ತು. ಪುರೋಹಿತ ವೇ|ಮೂ| ಕೃಷ್ಣ ಭಟ್ ಕಾರ್ಕಳ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.

ಕಂಬಳ ಕ್ಷೇತ್ರದ ತೀರ್ಪುಗಾರ ರಾಜೀವ ಶೆಟ್ಟಿ ಎಡ್ತೂರು ಅವರು ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಕಂಕಣ ಭಾಗ್ಯ ನೀಡುವ ಕಾರ್ಯ ಮಾಡುತ್ತಿದ್ದು, ಇಲ್ಲಿ ವಿವಾಹವಾದ ಜೋಡಿಗಳು ಆದರ್ಶ ದಂಪತಿಗಳಾಗಿ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು.

ಸಮಾರಂಭದ ನೇತೃತ್ವ ವಹಿಸಿದ್ದ ಎಂ.ತುಂಗಪ್ಪ ಬಂಗೇರ ಮಾತನಾಡಿ, ಸಾಕಷ್ಟು ವಿಜ್ರಂಭಣೆಯಿಂದ ವಿವಾಹ ನಡೆಸುವ ಆಲೋಚನೆ ಇತ್ತು. ಆದರೆ ಕೋವಿಡ್ ಕಾರಣಕ್ಕೆ ಅನಿವಾರ್ಯವಾಗಿ ತೀರಾ ಸರಳವಾಗಿ ವಿವಾಹ ಕಾರ್ಯ ನಡೆಸಲಾಗಿದೆ. ಜತೆಗೆ ಮೆದಾನಕ್ಕೆ 50 ಮಂದಿಗೆ ಹೆಚ್ಚಿನವರಿಗೆ ಅವಕಾಶ ನೀಡಿಲ್ಲ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದಿನ ದಿನಗಳಲ್ಲಿ ನಡೆಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹೆಗ್ಡೆ, ಮಾಜಿ ಅಧ್ಯಕ್ಷೆ ಲಕ್ಷ್ಮೀ ಜೆ.ಬಂಗೇರ, ಸ್ವರ್ಣೋದ್ಯಮಿ ಲೋಕೇಶ್ ಆಚಾರ್ಯ, ಉದ್ಯಮಿ ಹೇಮಂತ್ ಕುಮಾರ್, ಉದಯಕುಮಾರ್ ಶೆಟ್ಟಿ, ರಮೇಶ್ ಶೆಟ್ಟಿ ಮಜಲೋಡಿ, ರಂಜಿತ್ ಎಚ್.ಡಿ, ಬಡಗಕಜೆಕಾರು ಗ್ರಾ.ಪಂ. ಸದಸ್ಯ ಸತೀಶ್ ಪೂಜಾರಿ, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ ಲತೀಫ್, ಸಂಚಾಲಕ ರಾಜೇಶ್ ಪಿ.ಪುಂಜಾಲಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಪ್ರಭಾಕರ ಪಿ.ಎಂ.ಸ್ವಾಗತಿಸಿ, ವಂದಿಸಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಅವರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...