ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 37ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 16 ಜೋಡಿಗಳಿಗೆ 13ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭವು ಎ.25ರಂದು ಸರಳ ರೀತಿಯಲ್ಲಿ ಕೋವಿಡ್ ನಿಯಮಾನುಸಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪುಂಜಾಲಕಟ್ಟೆಯ ಬಂಗ್ಲೆ ಮೆದಾನದಲ್ಲಿ ನೆರವೇರಿತು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಸಹಿತ ಕೊರೋನ ಸೋಂಕು ಹರಡದಂತೆ ರಾಜ್ಯ ಸರ್ಕಾರ ರೂಪಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರಳವಾಗಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ವೀಡಿಯೊಗಳನ್ನು ಇಲ್ಲಿ ಹಾಕಲಾಗಿದೆ.