ದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ಪ್ರಜೆಗಳಿಗೆ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
45 ವರ್ಷ ಮೇಲ್ಪಟ್ಟವರಿಗೆ ಜನವರಿ 16ರಿಂದ ಆರಂಭಗೊಂಡಿರುವ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಇದೀಗ ಇನ್ನಷ್ಟು ವೇಗ ನೀಡಲಾಗುತ್ತಿದೆ.
45 ವರ್ಷ ಮೇಲ್ಪಟ್ಟವರಿಗೆ ದೇಶಾದ್ಯಂತ ಕೋವಿಡ್ ಲಸಿಕೆ ನೀಡುವ ಕಾರ್ಯ ಆರಂಭಿಸಿ ಎರಡು ತಿಂಗಳು ಕಳೆಯುತ್ತಿದ್ದಂತೆ ದೇಶದಲ್ಲಿ ಕೊರೋನ ಎರಡನೇ ಅಲೆಯ ಅಬ್ಬರ ತೀವ್ರಗೊಂಡಿದೆ. ದೇಶದಲ್ಲಿ ಪ್ರತಿದಿನ ಎರಡು ಲಕ್ಷಕ್ಕೂ ಹೆಚ್ಚಿನ ಜನರು ಕೊರೋನ ಸೋಂಕಿಗೆ ಒಳಗಾಗುತ್ತಿದ್ದಾರೆ.
ಭವಿಷ್ಯದಲ್ಲಿ ಉಂಟಾಗಬಹುದಾದ ಕೊರೋನ ಮೂರನೇ ಅಲೆಯನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ 18 ವರ್ಷ ಮೇಲಿನ ಪ್ರತಿ ನಾಗರಿಕರಿಗೆ ಲಸಿಕೆ ನೀಡುವ ಬಗ್ಗೆ ನಿರ್ಧರಿಸಿದೆ.