ಚೆನ್ನೈ: ಗುರುವಾರವಷ್ಟೇ ಕೋವಿಡ್ -19 ಲಸಿಕೆ ಹಾಕಿಸಿಕೊಂಡಿದ್ದ ತಮಿಳು ಚಿತ್ರರಂಗದ ಹಾಸ್ಯನಟ ನಟ ವಿವೇಕ್ ಅವರಿಗೆ ಶುಕ್ರವಾರ ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ವಿವೇಕ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯಾಘಾತಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.