Monday, April 15, 2024

ಅಟೋ ಸ್ಪೇರ್ ಪಾರ್ಟ್ಸ್ ಅಂಗಡಿಗೆ ಬೆಂಕಿ

ತೊಕ್ಕೊಟ್ಟು ಆಟೋ ಸ್ಪೇರ್ ಪಾರ್ಟ್ಸ್ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿ ಅವಘಢ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿ ಜಮಾಯಿಸಿರುವ ಮಂದಿಯನ್ನು ಚದುರಿಸುತ್ತಿದ್ದಾರೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...