Monday, April 22, 2024

*ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ*

ಬಂಟ್ವಾಳ : ಮೇ 21‌ ರಂದು‌ ರಾಷ್ಟ್ರ ವ್ಯಾಪ್ತಿ ಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ‌ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

 

ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಮಾತನಾಡಿ ನಮ್ಮ ದೇಶ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ ಭಯೋತ್ಪಾದಕ ಶಕ್ತಿಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು ಪರಸ್ಪರ ಸಹಕಾರದಿಂದ ಬದುಕಬೇಕು ಎಂದು ನುಡಿದರು.

ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

More from the blog

ಮತದಾನ ಬಹಿಷ್ಕಾರ ; ಕೋವಿ ಠೇವಣಿದಾರರಿಂದ ಫ್ಲೆಕ್ಸ್ ಅಳವಡಿಕೆ

ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ‌...

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...