ದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,12,784 ಲಕ್ಷ ಮಂದಿಗೆ ಹೊಸ ಕೊರೋನ ಸೋಂಕು ಪ್ರಕರಣಗಳು ದೃಢಪಟ್ಟಿದೆ. ಹಾಗೆಯೇ 3,980 ಸೋಂಕಿತರು ನಿನ್ನೆ ಒಂದೇ ದಿನ ಕೊನೆಯುಸಿರೆಳೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 920 ಮಂದಿ ಬಲಿಯಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ (357), ಕರ್ನಾಟಕ (346), ಪಂಜಾಬ್ (182), ಹರ್ಯಾಣ (181) ಮತ್ತು ತಮಿಳುನಾಡು (167) ಇದುವರೆಗಿನ ಗರಿಷ್ಠ ಸಂಖ್ಯೆಯನ್ನು ದಾಖಲಿಸಿವೆ.
ಬುಧವಾರ ಒಂದೇ ದಿನ ದೇಶದಲ್ಲಿ 78 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಹೆಚ್ಚಿದ್ದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 35 ಲಕ್ಷದ ಗಡಿ ದಾಟಿದೆ.
ಕರ್ನಾಟಕದಲ್ಲಿ ಬುಧವಾರ ಒಂದೇ ದಿನ 50,112 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರ ಹೊರತುಪಡಿಸಿ ಒಂದೇ ದಿನ ಅತ್ಯಧಿಕ ಪ್ರಕರಣ ದಾಖಲಾದ ಎರಡನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಮಹಾರಾಷ್ಟ್ರದಲ್ಲಿ 57,640 ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ.
ರಾಜ್ಯಾದ್ಯಂತ ಒಟ್ಟು 4,87,288 ಸಕ್ರಿಯ ಪ್ರಕರಣಗಳಿದ್ದು ಅವರೆಲ್ಲರೂ ಆಸ್ಪತ್ರೆ, ಆರೈಕೆ ಕೇಂದ್ರ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ದ.ಕ. ಜಿಲ್ಲೆಯಲ್ಲಿ ಬುಧವಾರ ನಾಲ್ಕು ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. 1,529 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈವರೆಗೆ 50,345 ಮಂದಿ ಕೊರೋನ ಸೋಂಕಿಗೊಳಗಾಗಿದ್ದು ಒಟ್ಟು 768 ಮಂದಿ ಕೊರೋನದಿಂದ ಮೃತಪಟ್ಟಿದ್ದಾರೆ.