Wednesday, April 17, 2024

ಕೊರೋನ ನಿಯಂತ್ರಣಕ್ಕೆ ಒಮ್ಮತದಿಂದ ಕೆಲಸ ನಿರ್ವಹಿಸಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 34 ಕೊರೋನ ಪ್ರಕರಣಗಳು ಇದ್ದು ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಇಳಿಕೆಯಗುವ ನಿಟ್ಟಿನಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು, ಜನಪ್ರತಿನಿಧಿಗಳು ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಜತೆಯಾಗಿ ಒಮ್ಮತದಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಗ್ರಾಮದ ಕೋವಿಡ್ ಟಾಸ್ಕ್ ಫೋರ್ಸ್‌ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಸೊಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರ ಕೋವಿಡ್ ಟೆಸ್ಟ್ ಕಡ್ಡಾಯವಾಗಿ ಮಾಡಲೇಬೇಕು. ವಿರೋಧಿಸಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಅವರು ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧ, ಉಪಾಧ್ಯಕ್ಷ ದಾಮೋದರ ನೆತ್ತರಕೆರೆ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ತಹಶೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಇಒ ರಾಜಣ್ಣ, ಪಿ.ಡಿ.ಒ. ಯಶೋಧ ಉಪಸ್ಥಿತರಿದ್ದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...