ಬಂಟ್ವಾಳ: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ರಸ್ತೆಗಿಳಿದರೆ ಹುಷಾರ್ ಎಂದು ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆಯನ್ನು ನೀಡಿದ್ದಾರೆ.
ಸೊಂಕು ಪ್ರಕರಣಗಳು ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಸರಕಾರ ಕೊರೊನಾ ನಿಯಂತ್ರಣಕ್ಕೆ ಮೇ 10ರಿಂದ ಮೇ 24ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಖರೀದಿಸಲು ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 9 ಗಂಟೆ ಯವರೆಗೆ ಅವಕಾಶ ನೀಡಲಾಗಿದೆ.
ಆದರೆ ಅನಗತ್ಯವಾಗಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿ ಹಾಗೂ ವಿಟ್ಲ ಕಡೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆಂದು ಅಂಗಡಿ ಬಾಗಿಲಲ್ಲಿ ನಿಲ್ಲುವುದು, ಗುಂಪು ಸೇರುವುದು, ಪೇಟೆಗೆ ತಿರುಗಾಟ ಮಾಡಿಕೊಂಡು ಬರುವುದು ಕಂಡು ಬಂದರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಮತ್ತು ಅಂತವರ ವಾಹನಗಳನ್ನು ವಶಕ್ಕೆ ಪಡೆಯಲಾಗುವುದು ಎಂಬ ಸಂದೇಶ ನೀಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕ್ರಿಕೆಟ್ ಸಹಿತ ಇನ್ನಿತರ ಆಟಗಳನ್ನು ಗುಂಪು ಸೇರಿಕೊಂಡು ಆಡುವ ಬಗ್ಗೆ ಯೂ ದೂರುಗಳು ಕೇಳಿ ಬಂದಿದ್ದು ಅವರ ಮೇಲೆ ಕೂಡ ಕ್ರಮಕೈಗೊಳ್ಳಲಾಗುವುದು. ಸರಕಾರದ ಕೋವಿಡ್ ನಿಯಮಗಳನ್ನುಪಾಲನೆ ಮಾಡುವುದರ ಜೊತೆಗೆ ಕೋವಿಡ್ ನಿಯಂತ್ರಣ ಸಾಧಿಸಲು ಸಾರ್ವಜನಿಕರು ಪೋಲೀಸರ ಜೊತೆ ಸಹಕಾರ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.