Saturday, April 6, 2024

ಮಂಗಳೂರು: ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಪೊಲೀಸ್‌ ಆಯುಕ್ತ ಎಚ್ಚರಿಕೆ

ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆ ಹಿನ್ನೆಲೆ ಸರ್ಕಾರ ಹೊರಡಿಸಿರುವ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಅವರು ತಿಳಿಸಿದ್ದಾರೆ.

ತಮ್ಮ ಕಚೇರಿಯಿಂದ ಆಯುಕ್ತರೊಂದಿಗೆ ಜನರು ನಡೆಸಿದ ಕೊರೊನಾ ಸಂಭಾಷಣೆಯ ಸಮಯದಲ್ಲಿ ಕೊರೊನಾ ಬಗ್ಗೆ ಸಾರ್ವಜನಿಕರಿಂದ ವಿವಿಧ ಸಲಹೆಗಳನ್ನು ಪಡೆದ ನಂತರ ಮಾತನಾಡಿದ ಅವರು, ಮಂಗಳೂರಿನಲ್ಲಿ ಜನರು ಸೂಕ್ಷ್ಮವಾಗಿರುತ್ತಾರೆ. ನಗರದ ಶೇ. 99ರಷ್ಟು ಜನರು ಕೊರೊನಾ ಮಾರ್ಗಸೂಚಿ ಅನುಸರಿಸುತ್ತಿದ್ದಾರೆ. ಹಾಗೆಯೇ ಜನರು ಮಾರ್ಗಸೂಚಿಗಳ ಉಲ್ಲಂಘನೆ ಮಾಡಿದಾಗ ನಾವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾವು ಸಾರ್ವಜನಿಕರ ಮೇಲೆ ಯಾವುದೇ ಒತ್ತಡವನ್ನು ಹೇರಿಲ್ಲ. ಕೆಲವೊಮ್ಮೆ ಸಾರ್ವಜನಿಕರ ಗುಂಪನ್ನು ಚದುರಿಸಲು ಅಥವಾ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಇಲಾಖೆಯು ಕನಿಷ್ಠ ಬಲವನ್ನು ಪ್ರಯೋಗ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

‘ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಮಾನವೀಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬರುವವರು ತಮ್ಮ ಟಿಕೆಟ್‌ಗಳನ್ನು ತೋರಿಸಿ ಪ್ರಯಾಣಿಸಬಹುದು. ವಿನಾಃ ಕಾರಣ ನಿಯಮ ಉಲ್ಲಂಘನೆಯಾದ ಸಂದರ್ಭದಲ್ಲಿ ನಾವು ಪ್ರಕರಣ ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ಪೊಲೀಸರೂ ಗುಂಪು ಗುಂಪಾಗಿ ಇರಬಾರದು ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಆಯುಕ್ತರು, ನಾವು ಪೊಲೀಸರಿಗೆ ಎಲ್ಲಾ ಕೊರೊನಾ ಮಾರ್ಗಸೂಚಿ ಪಾಲನೆಗೆ ಸೂಚನೆ ನೀಡಿದ್ದೇವೆ. ವೈದ್ಯಕೀಯ ಚಿಕಿತ್ಸೆ ಪಡೆಯಲು ಹಿರಿಯ ನಾಗರಿಕರಿಗೆ ಇಲಾಖೆಯ ವಾಹನಗಳನ್ನು ಬಳಸಿಕೊಂಡು ಪೊಲೀಸ್ ಸಿಬ್ಬಂದಿ ಸಹಾಯ ಮಾಡಿದ ಉದಾಹರಣೆಗಳಿವೆ ಎಂದು ಕೂಡಾ ಇದೇ ವೇಳೆ ಹೇಳಿದರು.

ಓರ್ವ ವ್ಯಕ್ತಿ ಬೆಂಗಳೂರಿನಿಂದ ಮಂಗಳೂರಿಗೆ ಬರಬಹುದೇ ಎಂಬ ಪ್ರಶ್ನಗೆ ಉತ್ತರಿಸಿದ ಆಯುಕ್ತರು, ನಿಜವಾದ ಕಾರಣವಾಗಿದ್ದರೆ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಹಾಗೆಯೇ ಯಾವುದೇ ಮಾನ್ಯ ಕಾರಣವಿಲ್ಲದೇ ಪ್ರಯಾಣಿಸಿದರೆ ಪ್ರಕರಣ ದಾಖಲು ಮಾಡಿ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಹಾಗೆಯೇ ಎಲೆಕ್ಟ್ರಿಷಿಯನ್‌ಗಳು ಪ್ರಯಾಣಿಸಲು ಅವಕಾಶವಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತುರ್ತು ಸಂದರ್ಭಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗುವುದು. ಇನ್ನು ಕೆಲವು ಸರ್ವಜನಿಕರು ಹೋಂ ಗಾರ್ಡ್‌ಗಳ ನಿಯೋಜಿಸುವ ಸಲಹೆ ನೀಡಿದ್ದು ನಾವು ನಗರದಲ್ಲಿ 150 ಹೋಂ ಗಾರ್ಡ್‌ಗಳನ್ನು ನಿಯೋಜಿಸಿದ್ದೇವೆ. 75 ಹೆಚ್ಚುವರಿ ಹೋಂ ಗಾರ್ಡ್‌ಗಳನ್ನು ಒದಗಿಸುವಂತೆ ನಾವು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದೇವೆ ಎಂದು ತಿಳಿಸಿದರು.

ಕೆಲವು ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಇರುವ ಸಮಯವನ್ನು 12ಕ್ಕೆ ವಿಸ್ತರಿಸಲು ಸೂಚಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಸರ್ಕಾರ ಮತ್ತು ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಾನ್ಯ ದಾಖಲೆ ತೋರಿಸಿ ಮೆಡಿಕಲ್‌ಗಳ ಮಾಲೀಕರು ಮತ್ತು ಸಿಬ್ಬಂದಿ ಪ್ರಯಾಣಿಸಬಹುದು. ಸಾರ್ವಜನಿಕ ಸ್ಥಳಗಳಲ್ಲಿ ವಾಕಿಂಗ್, ಜಾಗಿಂಗ್ ಮತ್ತು ಉದ್ಯಾನವನದಲ್ಲಿ ವಿಹಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಯಾವುದೇ ಪಾಸ್‌ಗಳನ್ನು ನೀಡಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಸಂಸ್ಥೆ, ಪಕ್ಷಗಳು ತಮ್ಮದೇ ಆದ ಪಾಸ್‌ಗಳೊಂದಿಗೆ ಚಲನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕೂಡಾ ಹೇಳಿದ ಆಯುಕ್ತರು, ಅಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರು ಪರಸ್ಪರ ಸಹಾಯ ಮಾಡಬೇಕು ಎಂದು ಹೇಳಿದರು.

ವೆನ್ಲಾಕ್‌ನಲ್ಲಿರುವ ಖಾಸಗಿ ಕಂಪನಿಯ ಭದ್ರತೆಯು ಧರ್ಮದ ಆಧಾರದ ಮೇಲೆ ರೋಗಿಗಳನ್ನು ದಾರಿ ತಪ್ಪಿಸುತ್ತಿದೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಶಶಿಕುಮಾರ್‌, ಈ ಬಗ್ಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ವೈದ್ಯರು, ದಾದಿಯರು, ಪೌರ ಕಾರ್ಮಿಕರು, , ಪೊಲೀಸ್ ಇಲಾಖೆಯ ಸಿಬ್ಬಂದಿಗಳಂತಹ ಮುಂಚೂಣಿ ಕಾರ್ಮಿಕರನ್ನು ಆಯುಕ್ತರು ಅಭಿನಂದಿಸಿದರು. ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮನೆಯಲ್ಲಿ ಸುರಕ್ಷಿತವಾಗಿರಬೇಕು ಎಂದು ಸಾರ್ವಜನಿಕರನ್ನು ಒತ್ತಾಯಿಸಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...