Wednesday, April 10, 2024

ಬಂಟ್ವಾಳದಲ್ಲಿ ಮುಂದುವರಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೋವಿಡ್ ಸೇವೆ

ಬಂಟ್ವಾಳ: ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಲಾಕ್ ಡೌನ್ ನಿಂದಾಗಿ ಸಂಕಷ್ಟ ಒಳಗಾಗಿರುವ ಬಿ.ಸಿ.ರೋಡ್ ಆಸುಪಾಸಿನ ಜನರಿಗೆ ಹಾಗೂ ಡೇರೆಯಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಉಚಿತ ಊಟ ವಿತರಣೆ ಇಂದು ಆರನೇ ದಿನ ಕೂಡ ನಡೆಯಿತು.‌

ಈ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಉಪಸ್ಥಿತಿಯಲ್ಲಿ ಹಾಗೂ ನಿರ್ದೇಶನದಂತೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಇಬ್ರಾಹೀಂ ನವಾಝ್ ಮುಂದಾಳುತ್ವದಲ್ಲಿ ಬ್ಲಾಕ್ ಎಲ್ಲಾ ಪದಾಧಿಕಾರಿಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಪ್ರಶಾಂತ್ ಕುಲಾಲ್ ನೆಟ್ಲ , ಸಾಮಾಜಿಕ ಜಾಲತಾಣ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಂಚಾಲಕರಾದ ಉಮ್ಮರ್ ಕುಂಞಿ, ಪದಾಧಿಕಾರಿಗಳಾದ ವಿನಯ್ ಸಿಂಧ್ಯಾ, ಹಫೀಝ್ ಸಾಲೆತ್ತೂರು, ರಾಹುಲ್ ಬಿ‌., ಇಸ್ರಾರ್ ಗೂಡಿನ ಬಳಿ, ಸಂದೀಪ್ ಬೆಂಜನ್ ಪದವು, ಜೈಸನ್ ಕ್ರಾಸ್ತಾ, ಸಿರಾಜ್ ಮದಕ ಸಹಿತ ಹಲವರು ಭಾಗವಹಿಸಿದ್ದರು.

ಈ ಮಹತ್ತರವಾದ ಕಾರ್ಯಕ್ರಮವನ್ನು ಲಾಕ್ ಡೌನ್ ಮುಗಿಯುವ ತನಕ ಮುಂದುವರಿಸಿಕೊಂಡು ಹೋಗುವ ಇರಾದೆ ನಮಗಿದ್ದು ಇದಕ್ಕೆ ಪಕ್ಷದ ಹಲವು ನಾಯಕರು, ಕೊಡುಗೈ ದಾನಿಗಳು, ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಕೈ ಜೋಡಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ನವಾಝ್ ತಿಳಿಸಿದ್ದಾರೆ.

ಈ ಲಾಕ್ ಡೌನ್ ಸಂಕಷ್ಟ ಒಳಗಾಗಿರುವ ಜನರ ಸೇವೆ ಮಾಡಲು ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ವತಿಯಿಂದ Covid19 Help Lin ಆರಂಭಿಸಿದ್ದು ಅದರಲ್ಲಿ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ತಂಡವನ್ನು ಐದು ವಿಭಾಗಗಳಾಗಿ ವಿಂಗಡಿಸಿ ವಿವಿಧ ಜವಾಬ್ದಾರಿಗಳನ್ನು ಅವರಿಗೆ ಹೊರಿಸಿದ್ದು ಅವರು ಹಲವು ದಿನಗಳಿಂದ ಕ್ಷೇತ್ರಾದ್ಯಂತ ಕಾರ್ಯಪ್ರವೃತ್ತರಾಗಿದ್ದು ಜನರ ಸಂಕಷ್ಟ ಗಳಿಗೆ ಧ್ವನಿ ಆಗುವ ಮೂಲಕ ಯುವ ಕಾಂಗ್ರೆಸ್ ಸಮಿತಿಯು ಕ್ಷೇತ್ರ ವ್ಯಾಪ್ತಿಯಲ್ಲಿ ಸಕ್ರೀಯವಾಗಿದೆ ಎಂದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...