ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಇಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಆಕ್ಸಿಜನ್ ಘಟಕದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಆಕ್ಸಿಜನ್ ಘಟಕದ ಪರಿಶೀಲನೆ ಬಳಿಕ ತಾಲೂಕಿನ ಕೋವಿಡ್ ನಿಯಂತ್ರಣದ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕಿಯೊನಿಕ್ಸ್ ರಾಜ್ಯಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.